ಶಿರ್ವ: ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಸರಳವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಸದ್ಭಾವನೆಯ ವಾತಾವರಣ ನಿರ್ಮಾಣವಾಗಲು ರಾಷ್ಟ್ರೀಯ ಸದ್ಭಾವನ ದಿನಾಚರಣೆ ದಿಕ್ಸೂಚಿಯಾಗಿದೆ ಎಂದರು.
ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಯಶೋದ, ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್, ಎನ್ಎಸ್ಎಸ್ ಯೋಜನಾಧಿಕಾರಿ ಪ್ರೇಮನಾಥ್, ರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.