ಪುತ್ತೂರು: ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದದು ಇಂದು ಅನಿವಾರ್ಯವಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನು ಪಡೆದು ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಢಿಸಿಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.
ಪುತ್ತೂರು ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ನ ಜಂಟಿ ಸಹಯೋಗದಲ್ಲಿ ಹೊಸದಾಗಿ ಸೇರ್ಪಡೆಯಾದ ಬಿಸಿಎ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗಗಳು ಮತ್ತು ಅವಕಾಶಗಳ ಬಗ್ಗೆ ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್, ಬೋಧಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕ ವಿಕ್ರಾಂತ್ ಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.