ಉಡುಪಿ: ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಸಹಕಾರದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಕಲಾವಿದರಿಗಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆಯಿತು.
ಉಡುಪಿ ಮಾನವ ಹಕ್ಕುಗಳ ಪ್ರಾಧಿಕಾರದ ಅಧ್ಯಕ್ಷೆ ಪೂರ್ಣಿಮಾ ಶೆಟ್ಟಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಯು. ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ| ಶಂಕರ್, ಆರೋಗ್ಯಾಧಿಕಾರಿ ಡಾ. ಹೇಮಂತ್ , ಕಾಪು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ವೈದ್ಯಕೀಯ ಸಿಬ್ಬಂದಿ ಸುಮಾ, ಪ್ರಖ್ಯಾತ, ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು. ಪ್ರತಿಷ್ಠಾನದ ಸದಸ್ಯ ವಿವೇಕಾನಂದ ಎನ್ ಕಾರ್ಯಕ್ರಮ ನಿರೂಪಿಸಿದರು.