ಉಡುಪಿ: ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಸೋಮವಾರ ಚಿನ್ನ ಬೆಳ್ಳಿ ಕೆಲಸಗಾರರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ ನಡೆಯಿತು. ಶಾಸಕ ಕೆ. ರಘುಪತಿ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕಿಶೋರ್ ಆರ್ ಆಚಾರ್ಯ, ಉಪಾಧ್ಯಕ್ಷ ಪ್ರಭಾಕರ ಆಚಾರ್ಯ, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಾಲಕೃಷ್ಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಆಚಾರ್ಯ ಉಪಸ್ಥಿತರಿದ್ದರು.