ಉಡುಪಿ: ದಿನಾಂಕ 24/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.
ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೈಂಟ್ ಸಿಸಿಲಿ ಶಾಲೆ, ಉಡುಪಿ)– ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (100 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಬಳಿ) ಕೋವ್ಯಾಕ್ಸಿನ್ 2ನೇ ಡೋಸ್ (100 ಲಭ್ಯ)
ನಿಟ್ಟೂರು ಹಿರಿಯ ಪ್ರಾಥಮಿಕ ಶಾಲೆ ಕರಂಬಳ್ಳಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (130 ಡೋಸ್ ಲಭ್ಯ)
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ 2ನೇ ಡೋಸ್ – (130 ಡೋಸ್ ಲಭ್ಯ)
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.