ಉಡುಪಿ: ದಿನಾಂಕ 27/08/2021 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮಹಾಮೇಳ ಜರುಗಲಿದೆ. ಆರೋಗ್ಯ ಕಾರ್ಯಕರ್ತರು/ಮುಂಚೂಣಿ ಕಾರ್ಯಕರ್ತರು/ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ/60 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆಯನ್ನು ಎಲ್ಲಾ ಸರಕಾರಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಪ್ರಥಮ ಆದ್ಯತೆಯ ಮೇರೆಗೆ ನೀಡಲಾಗುವುದು, ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಮತ್ತು 2ನೇ ಡೋಸ್ ಲಸಿಕೆ ನೀಡಲಾಗುವುದು.
ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)
ಶ್ರೀ ಶಿರಡಿ ಸಾಯಿಬಾಬ ಮಂದಿರ ತೋಟದಮನೆ, ಸಾಯಿಬಾಬ ನಗರ, ಕೊಡವೂರು ಪೋಸ್ಟ್ ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)
ಭಗವತಿ ದುರ್ಗಾಪರಮೇಶ್ವರಿ ಸಭಾಭವನ ಪುತ್ತೂರು- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)
ಬಾಳಿಗಾ ಫಿಶ್ ನೆಟ್ ನಿಟ್ಟೂರು, ಉಡುಪಿ- ಕೋವಿಶೀಲ್ಡ್ 2ನೇ ಡೋಸ್-(1000 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಡೋಸ್-(400 ಡೋಸ್ ಲಭ್ಯ) ಕೋವಿಶೀಲ್ಡ್ 2ನೇ ಡೋಸ್-(400 ಡೋಸ್ ಲಭ್ಯ)
ಮಂಜುನಾಥ ಶಿವತ್ತಾಯ ರಂಗಮಂಟಪ, ಯುವಕ ಮಂಡಲ (ರಿ) ಪೆರಂಪಳ್ಳಿ (ಬೊಬ್ಬರ್ಯ ಕಟ್ಟೆ ಹತ್ತಿರ)- ಕೋವಿಶೀಲ್ಡ್ ಪ್ರಥಮ ಡೋಸ್-(100 ಡೋಸ್ ಲಭ್ಯ) ಕೋವಿಶೀಲ್ಡ್ 2ನೇ ಡೋಸ್-(100 ಡೋಸ್ ಲಭ್ಯ)
ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ)ಮನ್ನೊಳಿ ಗುಜ್ಜಿ, ಸಗ್ರಿ ವಾರ್ಡ,ಉಡುಪಿ- ಕೋವಿಶೀಲ್ಡ್ ಪ್ರಥಮ ಡೋಸ್-(100 ಡೋಸ್ ಲಭ್ಯ) ಕೋವಿಶೀಲ್ಡ್ 2ನೇ ಡೋಸ್-(100 ಡೋಸ್ ಲಭ್ಯ)
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 9.30 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)
ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರು/ಮುಂಚೂಣಿ ಕಾರ್ಯಕರ್ತರು/ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ/ 60 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಮತ್ತು ೨ನೇ ಡೋಸ್ ಕೋವಿಡ್-19 ಲಸಿಕೆಯನ್ನು ಎಲ್ಲಾ ಸರಕಾರಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಪ್ರಥಮ ಆದ್ಯತೆಯ ಮೇರೆಗೆ ನೀಡಲಾಗುವುದು. ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ನೀಡಲಾಗುವುದು. ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಜಿಲ್ಲೆಯಲ್ಲಿ 40,000 ಡೋಸ್ ಲಸಿಕೆ ಲಭ್ಯವಿದ್ದು ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.