ಉಡುಪಿ: ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-25, ಕಾರ್ಕಳ-44, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 112 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71266 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1585 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 447 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 25 ರಂದು 7670 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 923145 ಮಾದರಿಗಳನ್ನು ಪರೀಕ್ಷಿಸಲಾಗಿದೆ.