Tuesday, October 1, 2024
Tuesday, October 1, 2024

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 10 ಸೆಂಟ್ಸ್ ವರೆಗೆ ಕೃಷಿಯಿಂದ ವಸತಿಗೆ ಭೂಪರಿವರ್ತನೆಗೆ ಅವಕಾಶ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 10 ಸೆಂಟ್ಸ್ ವರೆಗೆ ಕೃಷಿಯಿಂದ ವಸತಿಗೆ ಭೂಪರಿವರ್ತನೆಗೆ ಅವಕಾಶ

Date:

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಮತ್ತು 3000 ಚದರ ಅಡಿ ವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಸರಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು. ಈ ಸಂದರ್ಭ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಲಯ ನಿಯಮಾವಳಿಯಲ್ಲಿ ತಿದ್ದುಪಡಿ ತರಲು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ಚರ್ಚಿಸಲಾಯಿತು. ಅದರಲ್ಲಿ ಪ್ರಮುಖವಾಗಿ ವಾಸ್ತವ್ಯದ ಮನೆ ನಿರ್ಮಾಣಕ್ಕೆ 10 ಸೆಂಟ್ಸ್ ವರೆಗಿನ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶವಿಲ್ಲದೆ ಉಂಟಾಗಿರುವ ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚಿಸಿ ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರು ಈ ಹಿಂದೆ ಸದನದಲ್ಲಿ ಚರ್ಚಿಸಿರುವಂತೆ 10 ಸೆಂಟ್ಸ್ ವರೆಗಿನ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲು ಸೂಚಿಸಿ ಈಗ ಬಗ್ಗೆ ತಕ್ಷಣ ಸೂಕ್ತ ಜರುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಮಿತಿ ಅಧ್ಯಕ್ಷರು ಉಡುಪಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಗೌರವ್ ಗುಪ್ತಾ, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶಕರಾದ ಬಿ. ಬಿ. ಕಾವೇರಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಘವೇಂದ್ರ ಕಿಣಿ ಹರ್ಷ:

ಕರ್ನಾಟಕ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ, ಬಡವರ ಪರವಾದ ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ನೀಡಿದ ಕ್ಷೇತ್ರದ ಶಾಸಕರಾದ ಕೆ. ರಘುಪತಿ ಭಟ್ ಅವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ರಾಘವೇಂದ್ರ ಕಿಣಿ ಅಭಿನಂದನೆಗಳನ್ನು ತಿಳಿಸಿರುತ್ತಾರೆ. ಸರ್ಕಾರದ ಈ ನಿರ್ಣಯ ಜಾರಿ ಬಂದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇರುವ 3000 ಗಿಂತಲೂ ಹೆಚ್ಚು ಜನರಿಗೆ ತಮ್ಮ ಸ್ವಂತ ಮನೆ ಕಟ್ಟಲು ಅವಕಾಶ ಸಿಗಲಿದೆ. ಸಾರ್ವಜನಿಕರು ತಮಗೆ ಪಾಲು ಪಟ್ಟಿಯಲ್ಲಿ, ಅಥವಾ ವ್ಯವಸ್ಥಾಪನ ಪತ್ರ ಮೂಲಕ ಬಂದ ಜಾಗದಲ್ಲಿ ಸ್ವಂತ ಸೂರು ಕಟ್ಟಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಕೃಷಿ ವಲಯದಿಂದ ಹಲವಾರು ಮಂದಿಗೆ ವಸತಿ ವಲಯಗಳನ್ನಾಗಿ ಪರಿವರ್ತನೆ ಮಾಡಲು ಅವಕಾಶ ಇರಲಿಲ್ಲ. 10 ಸೆಂಟ್ಸ್ ಅವಕಾಶ ನೀಡಿದಲ್ಲಿ ಹಲವಾರು ಮಂದಿಗೆ ತಮ್ಮ ಸ್ವಂತ ಸೂರು ಕೊಳ್ಳಲು ಅವಕಾಶ ಸಿಗುವುದು. ಈ ಮೂಲಕ ಸುಮಾರು ವರ್ಷಗಳಿಂದ ಬಾಕಿ ಇದ್ದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!