ಉಡುಪಿ: ಉಡುಪಿ ಜಿಲ್ಲೆಯಲ್ಲಿ 106 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-52, ಕುಂದಾಪುರ-31, ಕಾರ್ಕಳ-22, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 187 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71453 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1503 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 448 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 26 ರಂದು 8172 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 931317 ಮಾದರಿಗಳನ್ನು ಪರೀಕ್ಷಿಸಲಾಗಿದೆ.