ಮಲ್ಪೆ: ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಪ್ರೊ. ಮಲ್ಲೇಶ್ವರಪ್ಪ ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾಲೇಜಿನ ಅಧ್ಯಾಪಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧ್ಯಾಪಕರು ತಮ್ಮ ವಿಷಯದ ಕುರಿತಂತೆ ಆಗಾಗ ಹೊಸ ಅಧ್ಯಯನವನ್ನು ನಡೆಸಬೇಕು. ಸಂಶೋಧನೆ ಉನ್ನತ ಶಿಕ್ಷಣ ಬೆಳವಣಿಗೆಗೆ ಅತೀ ಅಗತ್ಯ ಎಂದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಲೇಜಿನ ಬೆಳವಣಿಗೆಗೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಸ್ವಾಗತಿಸಿದರು. ನಿಕಟಪೂರ್ವ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಪ್ರಸ್ತಾವಿಕವಾಗಿ ಮಾತನಾಡಿದರು. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಎಂ. ಉಪಸ್ಥಿತರಿದ್ದರು.