ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 46,759 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 31,374 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,59,775 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,18,52,802 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 509 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,37,370 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 1,03,35,290 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 62,29,89,134 ಡೋಸ್ ಲಸಿಕೆ ನೀಡಲಾಗಿದೆ.