ಉಡುಪಿ: ಉಡುಪಿ ಜಿಲ್ಲೆಯಲ್ಲಿ 145 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-92, ಕುಂದಾಪುರ-20, ಕಾರ್ಕಳ-33 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 58 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71511 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1589 ಸಕ್ರಿಯ ಪ್ರಕರಣಗಳಿವೆ.
ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 449 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 27 ರಂದು 8914 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 940231 ಮಾದರಿಗಳನ್ನು ಪರೀಕ್ಷಿಸಲಾಗಿದೆ.