ಉಡುಪಿ: ಉಡುಪಿ ಜಿಲ್ಲೆಯಲ್ಲಿ 96 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-62, ಕುಂದಾಪುರ-17, ಕಾರ್ಕಳ-16, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 139 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71650 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1546 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 449 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 28 ರಂದು 10,321 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 950552 ಮಾದರಿಗಳನ್ನು ಪರೀಕ್ಷಿಸಲಾಗಿದೆ.