ಉಡುಪಿ: ದಿನಾಂಕ 06-11-2016 ರಂದು ಬೆಳಿಗ್ಗೆ 10-30 ಗಂಟೆಗೆ ಬಸ್ ಒಂದರ ಚಾಲಕನಾದ ಬಿಜಯ್ ಕುಮಾರ್ ಮಲಿಕ್ ಕುಂದಾಪುರ ಕಡೆಯಿಂದ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥ ರಸ್ತೆಯ ಉತ್ತರದ ತಾರು ರಸ್ತೆಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆಗೆ ಸತೀಶ್ ಇವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ ಮೋಟರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಪರಿಣಾಮ ಸತೀಶ್ ಪ್ರಭು ಮೋಟರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿದ್ದು ಢಿಕ್ಕಿ ಹೊಡೆದ ಬಸ್ಸಿನ ಹಿಂದಿನ ಎಡಬದಿಯ ಟಯರ್ ಸತೀಶ್ ಪ್ರಭುರವರ ತಲೆ ಮೇಲೆ ಹರಿದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿದ್ದು ಇವರು ತೀವ್ರ ತರದ ಗಾಯದ ವೇದನೆಯಿಂದ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿರುತ್ತಾರೆ. ಈ ಬಗ್ಗೆ ಬ್ರಹ್ಮಾವರ ವೃತ್ತ ನಿರೀಕ್ಷಕರಾಗಿದ್ದ ಶ್ರೀಕಾಂತ್ ಕೆ. ಅವರು ತನಿಖೆ ನಡೆಸಿ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಈ ಪ್ರಕರಣವು ಉಡುಪಿ 1ನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದಲ್ಲಿ ಸಾಕ್ಷ್ಯ ಹಾಗೂ ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುದ್ಧ ಮೇಲಿನ ಪ್ರಕರಣ ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ರವರು ಆರೋಪಿಗೆ ಭಾ.ದ.ಸಂ ಕಲಂ 279, 304(ಎ) ರಡಿ 2 ವರ್ಷ 9 ತಿಂಗಳು ಶಿಕ್ಷೆ ಮತ್ತು ಒಟ್ಟು ರೂ 11,000 ನ್ನು ದಂಡ ವಿಧಿಸಿ 30-08-2021 ರಂದು ತೀರ್ಪು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಮೋಹಿನಿ ಕೆ ರವರು ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.