ಉಡುಪಿ: ಉಡುಪಿ ಜಿಲ್ಲೆಯಲ್ಲಿ 97 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-62, ಕುಂದಾಪುರ-17, ಕಾರ್ಕಳ-18 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 137 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72513 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1372 ಸಕ್ರಿಯ ಪ್ರಕರಣಗಳಿವೆ.
ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 457 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 3 ರಂದು 7207 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1000961 ಮಾದರಿಗಳನ್ನು ಪರೀಕ್ಷಿಸಲಾಗಿದೆ.