Friday, September 20, 2024
Friday, September 20, 2024

ಸಜೀಪಮೂಡ‌ದಲ್ಲಿ ಪುರುಷಾಮೃಗದ ಅಪರೂಪದ ಶಿಲ್ಪವುಳ್ಳ ಬಂಗರಸನ ಶಾಸನ ಪತ್ತೆ

ಸಜೀಪಮೂಡ‌ದಲ್ಲಿ ಪುರುಷಾಮೃಗದ ಅಪರೂಪದ ಶಿಲ್ಪವುಳ್ಳ ಬಂಗರಸನ ಶಾಸನ ಪತ್ತೆ

Date:

ಬಂಟ್ವಾಳ: ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿಯವರ ತೋಟದಲ್ಲಿರುವ ಶಾಸನವನ್ನು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ| ತುಕಾರಾಮ ಪೂಜಾರಿಯವರು ಹಾಗೂ ಬಂಟ್ವಾಳ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷರಾದ ಯಶವಂತ ದೇರಾಜೆ ಅವರು ಈ ಮೊದಲು ಪತ್ತೆ ಮಾಡಿರುತ್ತಾರೆ.

ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ – ಉಡುಪಿ (ಎನ್.ಟಿ‌.ಸಿ- ಎ.ಒ.ಎಂ ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕರಾದ ಪ್ರೊ.ಎಸ್.ಎ.ಕೃಷ್ಣಯ್ಯ ಇವರ ಮಾರ್ಗದರ್ಶನದಲ್ಲಿ ಈ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದು, 15 ನೇ ಶತಮಾನದ ಈ ಶಾಸನವು ಜೈನ ಮನೆತನದ ಬಂಗರಸರಿಗೆ ಸೇರಿದ್ದು ಎಂದು ತಿಳಿಸಿದ್ದಾರೆ.

ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನವು 138 ಸೆಂ.ಮೀ ಎತ್ತರ ಹಾಗೂ 76 ಸೆಂ.ಮೀ ಅಗಲವಿದೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವು 17 ಸಾಲುಗಳನ್ನು ಹೊಂದಿದೆ. ಶಾಸನದ‌ ಮೇಲ್ಭಾಗದಲ್ಲಿ ಸೂರ್ಯ-ಚಂದ್ರರಿದ್ದು, ಮಧ್ಯ ಭಾಗದಲ್ಲಿ ಪ್ರಭಾವಳಿ ಸಹಿತ ಶಿವಲಿಂಗ ಹಾಗೂ ಇದರ ಬಲ ಭಾಗದಲ್ಲಿ ಶಿವಲಿಂಗವನ್ನು ಪೂಜಿಸುತ್ತಿರುವ ಪುರುಷಾಮೃಗ ಮತ್ತು ಎಡ ಭಾಗದಲ್ಲಿ ನಂದಿಯ ಉಬ್ಬು ಕೆತ್ತನೆ‌ ಇದೆ‌.

ಪ್ರಾಯಶಃ ಇದುವರೆಗೆ ಲಭ್ಯವಾಗಿರುವ ಕರ್ನಾಟಕದ ಶಾಸನಗಳಲ್ಲಿ ಪುರುಷಾಮೃಗದ ಕೆತ್ತನೆ ಇದೇ ಮೊದಲು ಪತ್ತೆಯಾಗಿರುವುದೆಂದು ಸಂಶೋಧನಾರ್ಥಿ ಅಭಿಪ್ರಾಯ ಪಟ್ಟಿರುತ್ತಾರೆ. ಶಾಸನದಲ್ಲಿ ಜಯಾಭ್ಯುದಯ ಶಾಲಿವಾಹನ ಶಕವರುಷ 1405 ನೆಯ ಶೋಭಕೃತ ಸಂವತ್ಸರದ ಜೇಷ್ಟ ಶುದ್ಧ 1 ಬುಧವಾರ ಎಂದು‌ ಉಲ್ಲೇಖವಿದ್ದು ಇದು ಕ್ರಿ. ಶ 1483 ಮೇ 17 ಬುಧವಾರಕ್ಕೆ ಸರಿ‌‌ ಹೊಂದುತ್ತದೆ. ಬಂಗ ದೊರೆ ಪಾಂಡ್ಯಪ್ಪರಸನ ಅಳಿಯನಾದ ಲಕ್ಷ್ಮಪ್ಪರಸ ಒಡೆಯನು ಯಿಚಿಲದ ಮಠಕ್ಕೆ ಚಂದ್ರಗ್ರಹಣದ ಸಮಯದಲ್ಲಿ ಬರೆಸಿ ಕೊಟ್ಟಂತಹ ದಾನ ಶಾಸನ ಇದಾಗಿದ್ದು, ಈ ಮಠಕ್ಕೆ ಅಕ್ಕಿಯ ನೈವೇದ್ಯಕ್ಕೆ 33 ಕಾಟಿ ಗದ್ಯಾಣಗಳನ್ನು ಧಾರಾ ಪೂರ್ವಕವಾಗಿ ಕೊಟ್ಟಂತಹ ದಾನವನ್ನು ಈ ಶಾಸನವು ಉಲ್ಲೇಖಿಸುತ್ತದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವನ್ನು ಕಾಣಬಹುದು.

ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಕಿಶನ್ ಕುಮಾರ್ ಮೂಡುಬೆಳ್ಳೆ ಹಾಗೂ ಸ್ಥಳೀಯರಾದ ಎಸ್‌. ಲಿಂಗಪ್ಪ ದೋಟ, ಕುಶೇಷ್ ಮತ್ತು ರಮೇಶ್ ಅನ್ನಪಾಡಿ ಅವರು ಸಹಕಾರ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!