ಉಡುಪಿ: ದಿನಾಂಕ 07/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.
ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(1000 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ)- ಕೋವ್ಯಾಕ್ಸಿನ್ 2ನೇ ಡೋಸ್-(100 ಡೋಸ್ ಲಭ್ಯ)
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(180 ಡೋಸ್ ಲಭ್ಯ)
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.