ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ -ಪಡುಕೆರೆ ಇಲ್ಲಿನ ಐಕ್ಯೂಎಸಿ ಆಶ್ರಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಕಾರ್ಯಗಾರ ಏರ್ಪಡಿಸಲಾಯಿತು. ವಿವಿಧ ವಿಭಾಗಗಳಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು, ಅವರ ಪಾಲಕರು ಹಾಗೂ ಉಪನ್ಯಾಸಕರಿಗಾಗಿ ನಡೆಸಲಾದ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ. ಮುರುಳಿ ಎನ್ ರವರು ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಪದವಿ ಶಿಕ್ಷಣದಲ್ಲಾಗಿರುವ ಬದಲಾವಣೆಗಳು, ವಿಷಯಗಳ ಆಯ್ಕೆ ವಿಧಾನ, ವಿದ್ಯಾರ್ಥಿಗಳಿಗೆ ಆಗುವ ಅನುಕೂಲತೆಗಳು ಡಿಪ್ಲೋಮ ಕೋರ್ಸ್ ಗಳು ಡಿಗ್ರಿ ಮತ್ತು ಹಾನರ್ಸ್ ಗಿರುವ ವ್ಯತ್ಯಾಸ ಉನ್ನತ ಶಿಕ್ಷಣದ ಅವಕಾಶಗಳು ಇತ್ಯಾದಿಗಳ ಕುರಿತಾಗಿ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಕುರಿತಾಗಿ ಯಾವುದೇ ಆತಂಕ ಗೊಂದಲಗಳು ಬೇಡ. ಇದನ್ನು ಅನುಷ್ಠಾನಗೊಳಿಸುವಲ್ಲಿ ಅಗತ್ಯ ಸಿದ್ದತೆಗಳನ್ನು ಕಾಲೇಜು ನಡೆಸಿದೆ ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದರು.
ರಾಜಕೀಯ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ನೀಲಾವರ ಪ್ರಾಸ್ತಾವಿಕ ನುಡಿಯಲ್ಲಿ ಕಾರ್ಯಕ್ರಮದ ಔಚಿತ್ಯ ತಿಳಿಸಿದರೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಸ್ವಾಗತಿಸಿ ಐಕ್ಯೂಎಸಿ ಸಂಚಾಲಕ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ರವಿ ಪ್ರಸಾದ್ ಕೆ. ಜಿ. ವಂದನಾರ್ಪಣೆಗೈದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಆಚಾರಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಐ. ಟಿ. ಕೋ ಆರ್ಡಿನೇಟರ್ ನಿತಿನ್ ಚೋಳ್ವೇಕರ್, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮನೋಹರ ಉಪ್ಪುಂದ, ಇತಿಹಾಸ ವಿಭಾಗ ಮುಖ್ಯಸ್ಥ ರಾಜಣ್ಣ ಎಂ. ಹಾಗೂ ಕಛೇರಿ ಸಹಾಯಕ ಸುಜೀಂದ್ರ ಕಾರ್ಯಕ್ರಮ ಆಯೋಜಿಸಿದರು.