Monday, November 25, 2024
Monday, November 25, 2024

ಕೇರಳದಿಂದ ರಾಜ್ಯಕ್ಕೆ ಬರಲು/ ಇಲ್ಲಿಂದ ಕೇರಳಕ್ಕೆ ಹೋಗಲು ನಿರ್ಧರಿಸಿದ್ದೀರಾ? ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವುದು ಉತ್ತಮ

ಕೇರಳದಿಂದ ರಾಜ್ಯಕ್ಕೆ ಬರಲು/ ಇಲ್ಲಿಂದ ಕೇರಳಕ್ಕೆ ಹೋಗಲು ನಿರ್ಧರಿಸಿದ್ದೀರಾ? ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವುದು ಉತ್ತಮ

Date:

ಉಡುಪಿ: ಕರ್ನಾಟಕಕ್ಕೆ ಆಗಮಿಸುವ ಕೇರಳದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಪ್ರಸ್ತುತ ಕೋವಿಡ್ 19 ನೆಗೆಟಿವ್ RT-PCR ವರದಿಯನ್ನು ಹೊಂದಿದ್ದು, ಆದರೆ ಕರ್ನಾಟಕಕ್ಕೆ ಬಂದ ಮೇಲೆ ಪರಿಶೀಲಿಸಿದಾಗ ಕೋವಿಡ್ 19 RT-PCR ವರದಿಯು ಪಾಸಿಟಿವ್ ಬರುತ್ತಿದ್ದು, ಅಂತಹ ಪ್ರಕರಣಗಳ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದ್ದು ಕೋವಿಡ್ -19 ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ಕೇರಳದಿಂದ ಆಗಮನಕ್ಕಾಗಿ ಸರಕಾರದಿಂದ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತಿದೆ. ಅದರಂತೆ ಈ ಕೆಳಗಿನಂತೆ ಸೂಚನೆಗಳನ್ನು ನೀಡಲಾಗಿದೆ.

1. ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆಡಳಿತಾಧಿಕಾರಿಗಳು/ ನರ್ಸಿಂಗ್ / ಪ್ಯಾರಾಮೆಡಿಕಲ್‌ನ/ ಪ್ರಾಂಶುಪಾಲರು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅಕ್ಟೋಬರ್-2021ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡುವುದು.

2. ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕಛೇರಿಗಳು, ಹೋಟೆಲ್‌ಗಳು, ಕಾರ್ಖಾನೆಗಳು, ಇತ್ಯಾದಿ ಎಲ್ಲಾ ಸಂಸ್ಥೆಗಳ ಮಾಲೀಕರು/ಆಡಳಿತಾಧಿಕಾರಿಗಳು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅಕ್ಟೋಬರ್-2021 ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡುವುದು.

3. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ತುರ್ತು ಇಲ್ಲದಿದ್ದರೆ ಕೇರಳಕ್ಕೆ ಭೇಟಿ ನೀಡುವ ಯೋಜನೆಯನ್ನು ಅಕ್ಟೋಬರ್-2021ರ ಅಂತ್ಯದವರೆಗೆ ಮುಂದೂಡಲು ಸಾರ್ವಜನಿಕರಿಗೆ ಮನವಿ ಮಾಡುತ್ತಾ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!