ಉಡುಪಿ: ಉಡುಪಿ ಜಿಲ್ಲೆಯಲ್ಲಿ 126 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-54, ಕುಂದಾಪುರ-33, ಕಾರ್ಕಳ-35, ಹೊರ ಜಿಲ್ಲೆಯ ನಾಲ್ವರು ಸೋಂಕಿಗೆ ಒಳಗಾಗಿದ್ದಾರೆ. 57 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 72963 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1437 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 458 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 8 ರಂದು 7028 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1031952 ಮಾದರಿಗಳನ್ನು ಪರೀಕ್ಷಿಸಲಾಗಿದೆ.