ಉಡುಪಿ: ಉಡುಪಿ ಜಿಲ್ಲೆಯಲ್ಲಿ 86 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-48, ಕುಂದಾಪುರ-23, ಕಾರ್ಕಳ-13, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 91 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73109 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 458 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 10 ರಂದು 4754 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1043897 ಮಾದರಿಗಳನ್ನು ಪರೀಕ್ಷಿಸಲಾಗಿದೆ.