ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 33,376 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-25,010) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಕೇರಳದಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಕಷ್ಟಸಾಧ್ಯವಾಗುತ್ತಿದ್ದು ದಿನೇ ದಿನೇ ಸೋಂಕು ಉಲ್ಭಣವಾಗುತ್ತಿದೆ. ದೇಶದ ಶೇ. 74.93 ದೈನಂದಿನ ಪಾಸಿಟಿವ್ ಪ್ರಕರಣಗಳು ಕೇರಳದಲ್ಲಿ ವರದಿಯಾಗಿರುವುದು ಕೇಂದ್ರ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಇದೇ ವೇಳೆ 32,198 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,91,516 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,23,74,497 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 308 ಮಂದಿ (ಕೇರಳ-177) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,42,317 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 65,27,175 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 73,05,89,688 ಡೋಸ್ ಲಸಿಕೆ ನೀಡಲಾಗಿದೆ.