ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 28,591 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-20,487) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ದೇಶಾದ್ಯಂತ ವರದಿಯಾಗಿರುವ ಶೇ. 72 ರಷ್ಟು ದೈನಂದಿನ ಪಾಸಿಟಿವ್ ಪ್ರಕರಣಗಳು ಕೇರಳದಲ್ಲಿ ಪತ್ತೆಯಾಗಿವೆ.
ಇದೇ ವೇಳೆ 34,848 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,84,921 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,24,09,345 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 338 ಮಂದಿ (ಕೇರಳ-181) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,42,655 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 72,86,883 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 73,82,07,378 ಡೋಸ್ ಲಸಿಕೆ ನೀಡಲಾಗಿದೆ.