Thursday, November 28, 2024
Thursday, November 28, 2024

ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿ

ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿ

Date:

ಗಾಂಧಿನಗರ: ಘಟ್ಲೊದಿಯಾ ವಿಧಾನಸಭಾ ಕ್ಷೇತ್ರದ ಶಾಸಕ ಭೂಪೇಂದ್ರ ಪಟೇಲ್ ಗುಜರಾತ್ ನೂತನ ಮುಖ್ಯಮಂತ್ರಿ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಚ್ಚರಿಯ ಆಯ್ಕೆಯಾಗಿ ಭೂಪೇಂದ್ರ ಪಟೇಲ್ ಹೆಸರು ಅಂತಿಮವಾಗಿದ್ದು ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಗುಜರಾತ್ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಸುದ್ಧಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ನೀಡಿದ್ದಾರೆ.

ಶನಿವಾರ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರನೆ ರಾಜೀನಾಮೆ ನೀಡಿದ್ದರು. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದ್ದು 2022ರಲ್ಲಿ ಗುಜರಾತ್ ಚುನಾವಣೆ ನಡೆಯಲಿದೆ.

ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ 2017 ಚುನಾವಣೆಯಲ್ಲಿ ಘಟ್ಲೊದಿಯಾ ವಿಧಾನಸಭಾ ಕ್ಷೇತ್ರದಿಂದ 1,17,000 ಮತಗಳ ಅಂತರದಲ್ಲಿ ದಾಖಲೆಯ ಗೆಲುವು ಸಾಧಿಸಿದ್ದರು.

ಮೊದಲ ಬಾರಿ ಶಾಸಕ, ಇದೀಗ ಸಿಎಂ ಆಗಿ ಆಯ್ಕೆಯಾದ ಭೂಪೇಂದ್ರ ಪಟೇಲ್ ಅವರು ಶಾಸಕರಾಗಿ ಆಯ್ಕೆಯಾಗುವ ಮೊದಲು ಸ್ಥಳೀಯಾಡಳಿತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಭೂಪೇಂದ್ರ ಪಟೇಲ್ ಶುದ್ಧಹಸ್ತ ರಾಜಕಾರಣಿ ಎಂಬ ಇಮೇಜ್ ಗಳಿಸಿದ್ದು ಅವರ ಆಯ್ಕೆಗೆ ಇಂಧನವಾಗಿ ಪರಿಣಮಿಸಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಬಾಲ್ಯ ವಿವಾಹ ಮುಕ್ತ ಭಾರತ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಾರಕೂರು, ನ.28: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಬಾರಕೂರು ಕಾಲೇಜು: ಸಂವಿಧಾನ ದಿನಾಚರಣೆ

ಬಾರಕೂರು, ನ.28: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ...

ಅಂಚೆ ಜನಸಂಪರ್ಕ ಅಭಿಯಾನ

ಉಡುಪಿ, ನ.28: ಭಾರತೀಯ ಅಂಚೆ ಇಲಾಖೆಯ ಉಡುಪಿ ವಿಭಾಗದ ವತಿಯಿಂದ ಬಡಗಬೆಟ್ಟು...

ಮೀನುಗಾರಿಕೆ ಸಚಿವ ಮಂಕಾಳ ವೈದ್ಯರೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಲ್ಪೆ ಮೀನುಗಾರರ ನಿಯೋಗದ ಸಭೆ

ಉಡುಪಿ, ನ.28: ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆಗೆ...
error: Content is protected !!