ಉಡುಪಿ: ಉಡುಪಿ ಜಿಲ್ಲೆಯಲ್ಲಿ 87 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-49, ಕುಂದಾಪುರ-20, ಕಾರ್ಕಳ-14, ಹೊರ ಜಿಲ್ಲೆಯ ನಾಲ್ವರು ಸೋಂಕಿಗೆ ಒಳಗಾಗಿದ್ದಾರೆ. 58 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73167 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1501 ಸಕ್ರಿಯ ಪ್ರಕರಣಗಳಿವೆ.
ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 459 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 11 ರಂದು 3250 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1047147 ಮಾದರಿಗಳನ್ನು ಪರೀಕ್ಷಿಸಲಾಗಿದೆ.