ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 27,254 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-20,240) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 37,687 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,74,269 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,24,47,032 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 219 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,42,874 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 53,38,945 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 74,38,37,643 ಡೋಸ್ ಲಸಿಕೆ ನೀಡಲಾಗಿದೆ.