ಉಡುಪಿ: ದಿನಾಂಕ 15/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.
ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)
ಇನ್ಫೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪೆರಂಪಳ್ಳಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(350 ಡೋಸ್ ಲಭ್ಯ)
ಎಲ್.ವಿ.ಪಿ. ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)
ಸರಸ್ವತೀ ಶಾಲೆ, ಶಿರಿಬೀಡು, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)
ದಿನಾಂಕ 10/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.