ಉಡುಪಿ: ಉಡುಪಿ ಜಿಲ್ಲೆಯಲ್ಲಿ 57 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-37, ಕುಂದಾಪುರ-11, ಕಾರ್ಕಳ-8, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 12 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73241 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1559 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 459 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 13 ರಂದು 3815 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1057046 ಮಾದರಿಗಳನ್ನು ಪರೀಕ್ಷಿಸಲಾಗಿದೆ.