Thursday, October 3, 2024
Thursday, October 3, 2024

ರಸ್ತೆಯಲ್ಲಿ ತ್ಯಾಜ್ಯ ರಾಶಿ- ಸೂಕ್ತ ಕ್ರಮಕ್ಕೆ ಆಗ್ರಹ

ರಸ್ತೆಯಲ್ಲಿ ತ್ಯಾಜ್ಯ ರಾಶಿ- ಸೂಕ್ತ ಕ್ರಮಕ್ಕೆ ಆಗ್ರಹ

Date:

ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ಸರ್ವಿಸ್ ರಸ್ತೆಯ ಪಕ್ಕದ ಪಾದಚಾರಿ ರಸ್ತೆಯ ಮೇಲೆ ಸಾರ್ವಜನಿಕರು ಪ್ಲಾಸ್ಟಿಕ್, ಕೋಳಿ ತ್ಯಾಜ್ಯ, ಹಸಿ ಮತ್ತು ಒಣ ತ್ಯಾಜ್ಯ, ಸತ್ತ ಪ್ರಾಣಿಗಳ ಕಳೇಬರಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ. ಪರಿಸರದಲ್ಲಿ ಗಬ್ಬು ವಾಸನೆ ಹಬ್ಬಿದ್ದು, ರೋಗವಾಹಕ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ತ್ಯಾಜ್ಯ ವಿಲೇವಾರಿಗೊಳಿಸಬೇಕು, ತ್ಯಾಜ್ಯ ಎಸೆಯುವವರನ್ನು ಪತ್ತೆಹಚ್ಚಲು ಕ್ರಮಗಳನ್ನು ಕೈಗೊಳ್ಳಬೇಕು, ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಬೇಕೆಂದು ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು...

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ,...

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಹೂಡೆ, ಅ.2: ರೋಟರಿ ಜಿಲ್ಲೆ 3182 ಇದರ ಮಹತ್ವದ ಯೋಜನೆ ಕೋಸ್ಟ್...
error: Content is protected !!