ಉಡುಪಿ: ಉಡುಪಿ ಜಿಲ್ಲೆಯಲ್ಲಿ 89 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-47, ಕುಂದಾಪುರ-14, ಕಾರ್ಕಳ-28 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 121 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73362 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1526 ಸಕ್ರಿಯ ಪ್ರಕರಣಗಳಿವೆ.
ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 460 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 14 ರಂದು 5925 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1062971 ಮಾದರಿಗಳನ್ನು ಪರೀಕ್ಷಿಸಲಾಗಿದೆ.