ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 30,570 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 38,303 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,42,923 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,25,60,474 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 431 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,43,928 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 64,51,423 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 76,57,17,137 ಡೋಸ್ ಲಸಿಕೆ ನೀಡಲಾಗಿದೆ.