ಉಡುಪಿ: ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-70, ಕುಂದಾಪುರ-12, ಕಾರ್ಕಳ-29, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 14 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73376 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1625 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 460 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 15 ರಂದು 7598 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1070569 ಮಾದರಿಗಳನ್ನು ಪರೀಕ್ಷಿಸಲಾಗಿದೆ.