Friday, October 4, 2024
Friday, October 4, 2024

ಉಡುಪಿ: ಶಾಲಾ ಕಾಲೇಜುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ

ಉಡುಪಿ: ಶಾಲಾ ಕಾಲೇಜುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ

Date:

ಉಡುಪಿ: ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿರುವ ಕುರಿತಂತೆ, ಕರ್ನಾಟಕ ಲೋಕಾಯುಕ್ತರು, ಬೆಂಗಳೂರು ಇವರ ಸೂಚನೆಯಂತೆ, ಮಂಗಳೂರಿನ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ, ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಗದೀಶ್ ಎಂ, ಪೊಲೀಸ್ ನಿರೀಕ್ಷಕ ಜಯರಾಮ ಡಿ ಗೌಡ, ರಾಜಶೇಖರ ಎಲ್ ಹಾಗೂ ಸಿಬ್ಬಂದಿಗಳು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜು, ಇಂದ್ರಾಳಿ ಪ್ರೈಮರಿ ಮತ್ತು ಹೈಯರ್ ಪ್ರೈಮರಿ ಸ್ಕೂಲ್, ಉಡುಪಿಯ ಸರಕಾರಿ ಬೋರ್ಡ್ ಹೈಸ್ಕೂಲ್ ಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲಾ ಭೇಟಿ ವೇಳೆ, ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸೇಶನ್ ಮಾಡುವುದು ಮತ್ತು ಮನೆಯಿಂದಲೇ ಬಿಸಿ ನೀರು ಮತ್ತು ಆಹಾರ ಪದಾರ್ಥಗಳನ್ನು ತರುವ ಬಗ್ಗೆ ಮತ್ತು ಶಾಲೆಯಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಜಾಗೃತಿ ಮೂಡಿಸಿ, ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ಉಡುಪಿ ಜಿಲ್ಲೆಯ ಭೇಟಿ ವೇಳೆ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಲಿದ್ದು, ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು ಸರ್ಕಾರದ ಸುತ್ತೋಲೆಯಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಕೋವಿಡ್ ನಿಯಮ ಪಾಲಿಸುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!