ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 35,662 ಹೊಸ ಪಾಸಿಟಿವ್ (ಕೇರಳ-23,260) ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 33,798 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,40,639 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,26,32,222 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 281 ಮಂದಿ (ಕೇರಳ-131) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,44,529 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 2.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.