ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 30,773 ಹೊಸ ಪಾಸಿಟಿವ್ (ಕೇರಳ-19,325) ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 38,945 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,32,158 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,26,71,167 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 309 ಮಂದಿ (ಕೇರಳ-143) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,44,838 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 85,42,732 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 80,43,72,331 ಡೋಸ್ ಲಸಿಕೆ ನೀಡಲಾಗಿದೆ.