ಉಡುಪಿ: ಉಡುಪಿ ಜಿಲ್ಲೆಯಲ್ಲಿ 84 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-47, ಕುಂದಾಪುರ-18, ಕಾರ್ಕಳ-19 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 232 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 74011 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1249 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 464 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 18 ರಂದು 8007 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1091112 ಮಾದರಿಗಳನ್ನು ಪರೀಕ್ಷಿಸಲಾಗಿದೆ.