ಬೆಳ್ಮಣ್: ಸರಕಾರಿ ಶಾಲೆಯಲ್ಲಿ ದಾಖಲಾತಿಗಳು ಕಡಿಮೆ ಆಗುತ್ತಿದ್ದು ಈ ಹಿನ್ನಲೆಯಲ್ಲಿ ನಂದಳಿಕೆ ಗ್ರಾಮದ ಒಂದು ಕನ್ನಡ ಶಾಲೆಯು ಈಗಾಗಲೇ ಮುಚ್ಚಲ್ಪಟ್ಟಿದೆ. ಈಗ ಉಳಿದಿರುವ ಒಂದು ಕನ್ನಡ ಶಾಲೆ 100 ವರ್ಷವನ್ನು ಪೂರೈಸುತ್ತಿದ್ದು ಪ್ರಸಕ್ತ ವರ್ಷ ಒಟ್ಟು 75 ಮಕ್ಕಳು ಕಲಿಯುತ್ತಿದ್ದಾರೆ.
ನಂದಳಿಕೆ ಗ್ರಾಮದ ಹೆಚ್ಚಿನ ಪೋಷಕರು ತಮ್ಮ ಮಕ್ಕಳಿಗೆ ಆಂಗ್ಲ ಮಾದ್ಯಮ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ಆಂಗ್ಲ ಮಾದ್ಯಮ ಶಾಲೆಗೆ ಸೇರಿಸುತ್ತಿದ್ದಾರೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಲ್ಲಿ ತಿಳಿದುಬಂದಿದ್ದು, ಈ ಹಿನ್ನಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಗ್ರಾಮ ಪಂಚಾಯತ್, ಹಳೆ ವಿದ್ಯಾರ್ಥಿ ಸಂಘ, ಹಾಗೂ ದಾನಿಗಳ ನೆರವಿನಿಂದ ಈ ವರ್ಷದಿಂದ ಇಂಗ್ಲೀಷ್ ಸ್ಪೀಕಿಂಗ್ ಕೋರ್ಸನ್ನು 1 ನೇ ತರಗತಿಯಿಂದಲೇ ಪ್ರಾರಂಭಿಸಲಾಗುವುದು ಹಾಗೂ ಸರಕಾರಿ ಶಾಲೆ ಮಕ್ಕಳು ಯಾವುದೇ ಖಾಸಗಿ ಆಂಗ್ಲ ಮಾದ್ಯಮ ಶಾಲಾ ಮಕ್ಕಳಿಗಿಂತ ಕಡಿಮೆ ಇಲ್ಲ ಎನ್ನುವುದನ್ನು ನಿರೂಪಿಸುವ ನಿಟ್ಟಿನಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಈ ಒಂದು ವಿನೂತನ ಕಾರ್ಯಕ್ಕೆ ಮುಂದಾಗಿದೆ ಎಂದು ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ್ ಅಮೀನ್ ಅವರು ಬೋರ್ಡ್ ಶಾಲೆಯಲ್ಲಿ ಪೋಷಕರ, ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ವಿಶೇಷ ಸಭೆಯಲ್ಲಿ ತಿಳಿಸಿದರು.
ಬೋರ್ಡ್ ಶಾಲೆಯನ್ನು ಅಮೃತ ಶಾಲಾ ಸೌಲಭ್ಯ ಯೋಜನೆಗೆ ಶಿಫಾರಸ್ಸು ಮಾಡುವಂತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ರವರಿಗೆ ಮನವಿ ನೀಡುವುದಾಗಿ ತಿಳಿಸಿದರು.
Inthaha kelasagalu ella sarakari shaleyallu agbeku. Ella makkaligu english education sigbeku. Very good initiative