ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬದ ಪ್ರಯುಕ್ತ ಹಾಗೂ ನರೇಂದ್ರ ಮೋದಿಯವರು ಜನಪ್ರತಿನಿಧಿಯಾಗಿ 20 ವರ್ಷ ಪೂರ್ತಿಗೊಂಡ ಹಿನ್ನಲೆಯಲ್ಲಿ ಸೇವಾ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಇಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಮಾರ್ಗದರ್ಶನದಲ್ಲಿ, ಉಡುಪಿ ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಉಡುಪಿ ನಗರದ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ರಾಜ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ್, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ನಾಯಕ್, ನಗರಸಭೆ ಸದಸ್ಯರಾದ ಭಾರತಿ ಪ್ರಶಾಂತ್, ರಜನಿ ಹೆಬ್ಬಾರ್, ಸಂತೋಷ ಜತ್ತನ್, ಗಿರಿಧರ ಆಚಾರ್ಯ, ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್ ಹಾಗೂ ಯುವ ಮೋರ್ಚ ಪದಾಧಿಕಾರಿಗಳಾದ ಶ್ರೀವತ್ಸ ಕಾರ್ತಿಕ್ ಪಾಲನ್, ಶರತರಾಜ್, ಯೋಗೀಶ್ ದೇವಾಡಿಗ, ಸಂದೇಶ ಪ್ರಭು, ನಿಖಿಲ್ ಮಡಿವಾಳ, ಧನುಷ್ ಬಿಕೆ, ಪ್ರಣವ್ ಕಾಮತ್, ಗಗನ್ ಶೆಟ್ಟಿ, ಅಕ್ಷಯ ಬಂಗೇರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.