ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 26,727 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-15,914) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 28,246 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,75,224 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,30,43,144 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 277 ಮಂದಿ (ಕೇರಳ-122) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,48,339 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 64,40,451 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 89,02,08,007 ಡೋಸ್ ಲಸಿಕೆ ನೀಡಲಾಗಿದೆ.