ಕಾರ್ಕಳ: ಪಡಿ ಸಂಸ್ಥೆ ಮಂಗಳೂರು, ಹಿರ್ಗಾನ ಗ್ರಾಮ ಪಂಚಾಯತ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್-19 ಜನಜಾಗೃತಿ ಮತ್ತು ಪರಿಹಾರ ಆಂದೋಲನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇವರು ಫಲಾನುಭವಿಗಳಿಗೆ ಕೋವಿಡ್ ಪರಿಹಾರ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ದಿವಾಕರ್ ಕುಮಾರ್ ಪಡಿ ಸಂಸ್ಥೆಯ ಬಗ್ಗೆ ಮತ್ತು ಕೋವಿಡ್-19ರ ಸಾಂಕ್ರಾಮಿಕ ಸೋಂಕು ಕಾಯಿಲೆ ಬಂದ ನಂತರ ಜನಜೀವನ ಅಸ್ತವ್ಯಸ್ತವಾಗಿದ್ದು ಕೆಲವರು ತಮ್ನ ಕಟುಂಬಗಳನ್ನೆ ಕಳೆದುಕೊಂಡಿದ್ದಾರೆ ಮತ್ತು ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದಾರೆ, ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಸ್ಥಳೀಯ ಸರಕಾರಗಳಲ್ಲಿ, ಈ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾ ಕುಮಾರಿ, ಗ್ರಾಮ ಪಂಚಾಯತ್ ನ ಸದಸ್ಯರು, ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆ ಕಾರ್ಕಳ ತಾಲೂಕು ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್, ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ ಸದಸ್ಯರಾದ ಶೋಭಾ ಭಾಸ್ಕರ್, ರೇಷ್ಮಾ, ಪಡಿ ಸಂಸ್ಥೆ ಉಡುಪಿ ಜಿಲ್ಲಾ ಸಂಯೋಜಕ ವಿವೇಕ್ ಮುಂತಾದವರು ಉಪಸ್ಥಿತರಿದ್ದರು.