Wednesday, November 27, 2024
Wednesday, November 27, 2024

ಪಟ್ಲ: ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

ಪಟ್ಲ: ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

Date:

ಪಟ್ಲ: ರೋಟರಿ ಉಡುಪಿ ನೇತೃತ್ವದಲ್ಲಿ ಶ್ರೀ ಕೃಷ್ಣ ರೋಟರಾಕ್ಟ್ ಕ್ಲಬ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಟ್ಲ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ ಇಂದು ನಡೆಯಿತು.

ರೋಟರಿ ಉಡುಪಿ ಅಧ್ಯಕ್ಷ ಹೇಮಂತ್ ಯು ಕಾಂತ್ ಪದಪ್ರಧಾನ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಮಾಜಮುಖಿಯಾಗಿ ತೆರೆದುಕೊಂಡರೆ ಅವರ ವೈಯಕ್ತಿಕ ಅಭಿವೃದ್ಧಿಯ ಜತೆಗೆ ಸಾಮಾಜಿಕ ಬದಲಾವಣೆ ಕೂಡ ಆಗುವುದು. ಅರ್ಹರಿಗೆ ಸಹಾಯ, ಪರಸ್ಪರ ಸಹಕಾರ ಮನೋಭಾವ ಯಶಸ್ಸಿಗೆ ಮೆಟ್ಟಿಲು. ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಸಂಪನ್ಮೂಲಗಳ ಸದ್ಬಳಕೆಯನ್ನು ಮಾಡಿದರೆ ವಿದ್ಯಾರ್ಥಿಯು ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್, ನೈತಿಕ ಶಿಕ್ಷಣ ಇಂದಿನ ಅಗತ್ಯವಾಗಿದೆ. ವಿದ್ಯಾರ್ಜನೆಯ ಸಂದರ್ಭದಲ್ಲಿ ದೀರ್ಘಾವಧಿಯ ಗುರಿಗಳನ್ನು ಇಡಬೇಕು. ಸ್ಪರ್ಧಾತ್ಮಕ ಮನೋಭಾವ ಮತ್ತು ಅದಕ್ಕೆ ತಕ್ಕಂತೆ ಜೀವನಶೈಲಿಯನ್ನು ರೂಪಿಸಿಕೊಳ್ಳಬೇಕು. ಯಶಸ್ಸಿಗೆ ಕಠಿಣ ಪರಿಶ್ರಮವೇ ಇಂಧನ. ದಿನನಿತ್ಯ ಹೊಸವಿಚಾರವನ್ನು ಕಲಿಯುವ ಹಂಬಲ ಮತ್ತು ಒಳ್ಳೆಯ ಹವ್ಯಾಸಗಳನ್ನು ನಮ್ಮಲ್ಲಿ ಅಳವಡಿಸಿಕೊಂಡರೆ ಮೌಲ್ಯಯುತವಾದ ಜೀವನ ನಡೆಸಿ ಇತರರಿಗೆ ಮಾದರಿಯಾಗಲು ಸಾಧ್ಯ ಎಂದರು.

ಚೈಲ್ಡ್ ಲೈನ್ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ ಇಂಟರಾಕ್ಟ್ ಕ್ಲಬ್ ಕುರಿತು ಮಾರ್ಗದರ್ಶನ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಪೂರ್ಣಿಮ, ರೋಟರಿ ಉಡುಪಿ ಕಾರ್ಯದರ್ಶಿ ಜೆ. ಗೋಪಾಲಕೃಷ್ಣ ಪ್ರಭು, ಶ್ರೀ ಕೃಷ್ಣ ರೋಟರಾಕ್ಟ್ ಕ್ಲಬ್ ಅಧ್ಯಕ್ಷರಾದ ಮೇಘನಾ ರಾವ್, ಕಾರ್ಯದರ್ಶಿ ತನ್ವಿ ವಿಶಿಷ್ಟ, ಇಂಟರಾಕ್ಟ್ ಅಧ್ಯಕ್ಷ ಕಳಗಪ್ಪ, ರೋಟರಿ ಉಡುಪಿ ಹಾಗೂ ಶ್ರೀ ಕೃಷ್ಣ ರೋಟರಾಕ್ಟ್ ಕ್ಲಬ್ ಪದಾಧಿಕಾರಿಗಳು, ಬೋಧ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶ್ರೀ ಕೃಷ್ಣ ರೋಟರಾಕ್ಟ್ ಕ್ಲಬ್ ವತಿಯಿಂದ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಸಭಾ ಕಾರ್ಯಕ್ರಮಕ್ಕೂ ಮೊದಲು ವಿದ್ಯಾರ್ಥಿಗಳು ಹಾಗೂ ಬೋಧಕರು ಶಾಲಾ ವಠಾರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!