ಉಡುಪಿ: ಉಡುಪಿ ಜಿಲ್ಲೆಯಲ್ಲಿ 33 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-17, ಕುಂದಾಪುರ-12, ಕಾರ್ಕಳ-4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 61 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75801 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 103 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 2 ರಂದು 4541 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1145505 ಮಾದರಿಗಳನ್ನು ಪರೀಕ್ಷಿಸಲಾಗಿದೆ.