ಬ್ರಹ್ಮಾವರ: ಉಡುಪಿ ಗ್ರಾಮಾಂತರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸೇವಾ ಸಮರ್ಪಣಾ ಅಭಿಯಾನದ ಭಾಗವಾಗಿ ಅಲ್ಪಸಂಖ್ಯಾತ ಮೋರ್ಚಾದ ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ಸುನೀತಾ ಡಿಸೋಜ ಅವರ ನೇತೃತ್ವದಲ್ಲಿ ಗೋಪೂಜೆ ನೆರವೇರಿಸಿ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಡುಪಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ವೀಣಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಗೋವಿಗಾಗಿ ಮೇವು ಕಾರ್ಯಕ್ರಮ ಪೇಜಾವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ರಾಷ್ಟ್ರಮಟ್ಟ ತಲುಪಲಿ ಎಂದರು.
ಗೋವಿಗಾಗಿ ಮೇವು ಸ್ಥಾಪಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ಗೋಪೂಜೆ ನೆರವೇರಿಸಿ ಮೇವು ನೀಡಿರುವುದು ರಾಜ್ಯಕ್ಕೆ ಮಾದರಿ ಎಂದು ಹೇಳಿದರು.
ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ ಕುಮಾರ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ದಿನೇಶ್ ಚಾಂತಾರು, ಪ್ರಧಾನ ಕಾರ್ಯದರ್ಶಿ ರಾಜಶ್ರೀ ಉಪ್ಪೂರು ಹಾಗೂ ಅಲ್ಪಸಂಖ್ಯಾತ ಮೋರ್ಚಾದ ಪಧಾದಿಕಾರಿಗಳು ಉಪಸ್ಥಿತರಿದ್ದರು. ನೀಲಾವರ ಗೋಶಾಲೆಗೆ 1 ಲೋಡ್ ಒಣ ಹುಲ್ಲು ಹಸ್ತಾಂತರಿಸಲಾಯಿತು.