ಉಡುಪಿ: ಉಡುಪಿ ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-9, ಕುಂದಾಪುರ-4, ಕಾರ್ಕಳ-2, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 27 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75896 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 67 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 6 ರಂದು 3952 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1155765 ಮಾದರಿಗಳನ್ನು ಪರೀಕ್ಷಿಸಲಾಗಿದೆ.