ಉಡುಪಿ: ಉಡುಪಿ ಜಿಲ್ಲೆಯಲ್ಲಿ 21 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-11, ಕುಂದಾಪುರ-5, ಕಾರ್ಕಳ-4, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 13 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75923 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 84 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 8 ರಂದು 3139 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1161537 ಮಾದರಿಗಳನ್ನು ಪರೀಕ್ಷಿಸಲಾಗಿದೆ.