ಉಡುಪಿ: ಉಡುಪಿ ಜಿಲ್ಲೆಯಲ್ಲಿ 18 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-10, ಕುಂದಾಪುರ-2, ಕಾರ್ಕಳ-5, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 10 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75933 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 92 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 9 ರಂದು 3652 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1165189 ಮಾದರಿಗಳನ್ನು ಪರೀಕ್ಷಿಸಲಾಗಿದೆ.