ಬೆಂಗಳೂರು: ಕಲ್ಲಿದ್ದಲು ಅಭಾವದ ಕಾರಣವೊಡ್ಡಿ ವಿದ್ಯುತ್ ಪೂರೈಸುವ ಕಂಪೆನಿಗಳ ಜೊತೆ ಶಾಮೀಲಾಗಿ ವಿದ್ಯುತ್ ದರವನ್ನು ಏರಿಸುವ ಹುನ್ನಾರ ಇರಬಹುದೇ ಎಂದು ಜನ ಸಂಶಯಪಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ದೇಶದಲ್ಲಿ ಕಲ್ಲಿದ್ದಲು ಅಭಾವದ ಸಮಸ್ಯೆ ಗಂಭೀರ ಸ್ವರೂಪ ಪಡೆದಿದೆ. ಈಗಿನ ಕೊರತೆಗೆ ಮಳೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಲ್ಲಿದ್ದಲು ಬೆಲೆ ಹೆಚ್ಚಳ ಎಂಬ ಕಾರಣಗಳನ್ನು ಕೇಂದ್ರ ಸರ್ಕಾರ ನೀಡಿದರೂ, ಸರ್ಕಾರದ ಹೇಳಿಕೆಗಳನ್ನು ಜನ ನಂಬುತ್ತಿಲ್ಲ.
ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂಬ ಬಗ್ಗೆ ಮೊದಲು ಗೊತ್ತಾಗಬೇಕು. ನಮ್ಮಲ್ಲಿ ಬೇಡಿಕೆಗಿಂತ ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದ ಕಾರಣದಿಂದ ಕೆಲವು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಗಿತಗೊಳಿಸಲಾಗಿತ್ತು.
ರಾಜ್ಯ ಸರ್ಕಾರ ವಿದ್ಯುತ್ ಉತ್ಪಾದಕಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಕಲ್ಲಿದ್ದಲಿನ ಕೃತಕ ಅಭಾವ ಸೃಷ್ಟಿ ಮಾಡಿದ್ದರೆ ಅದಕ್ಕೆ ನನ್ನ ವಿರೋಧವಿದೆ ಎಂದು ಸಿದ್ಧರಾಮಯ್ಯ ಹೇಳಿದರು.