ಕಾರ್ಕಳ: ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಗಳ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ಹಾಗೂ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು ಜ್ಞಾನಸುಧಾ ಆವರಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿ ಕರುಣಾಕರ ಶೆಟ್ಟಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಶಿಬಿರದಲ್ಲಿ ಹೃದಯರೋಗ, ಕಿವಿ, ಮೂಗು, ಗಂಟಲು, ಕಿಡ್ನಿ, ಕಣ್ಣಿನ ಪೊರೆಯ ಉಚಿತ ತಪಾಸಣೆ ಜರುಗಿದ್ದು, ಕಣ್ಣಿನ ಪೊರೆಯ ಚಿಕಿತ್ಸೆ ಅಗತ್ಯವಿರುವ ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇಲ್ಲಿ ನಡೆಸಲಾಗುವುದು.
ವೈದ್ಯಕೀಯ ತಜ್ಞರಾದ ಡಾ. ಅನನ್ಯ, ಡಾ. ಸಿದ್ಧಾರ್ಥ್, ಡಾ. ಆದಿತ್ಯ, ಡಾ. ಜೋಯ್, ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ಉಪಪ್ರಾಂಶುಪಾಲರಾದ ಸಾಹಿತ್ಯ, ಎನ್.ಸಿ.ಸಿ. ಅಧಿಕಾರಿಗಳಾದ ಸುಮಿತ್ ಹಾಗೂ ಮಂಜುನಾಥ್ ಉಪಸ್ಥಿತರಿದ್ದರು.
ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿ, ಉಪನ್ಯಾಸಕರಾದ ಸಂತೋಶ್ ನೆಲ್ಲಿಕಾರು ಪ್ರಾರ್ಥಿಸಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ. ವಂದಿಸಿ, ಶಮಿತಾ ಕಾರ್ಯಕ್ರಮ ನಿರೂಪಿಸಿದರು.