ಮಲ್ಪೆ: ಶ್ಯಾಮಿಲಿ ಪದವಿಪೂರ್ವ ಕಾಲೇಜು ಕಿದಿಯೂರು ಇಲ್ಲಿನ 2021-22ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಹಿಂದಿನ ವರ್ಷ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಜಂಟಿಯಾಗಿ ಜರಗಿತು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಗಣನಾಥ ಎಕ್ಕಾರ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ವ್ಯಕ್ತಿಯಾಗಿ ಬೆಳೆಯಬೇಕಾದರೆ ಜ್ಞಾನಾರ್ಜನೆ, ಕೌಶಲ್ಯಾಭಿವೃದ್ಧಿ ಹಾಗೂ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಆಡಳಿತ ಮಂಡಳಿಯ ಸದಸ್ಯೆ ಶ್ಯಾಮಿಲಿ ನವೀನ್ ಮಾತನಾಡುತ್ತಾ, ವಿದ್ಯಾರ್ಥಿಗಳು ಪಠ್ಯ ವಿಷಯಗಳನ್ನು ಹಾಗೂ ಪಠ್ಯೇತರ ವಿಷಯಗಳಲ್ಲೂ ಕ್ಷಮತೆಯಿಂದ ಉತ್ತಮವಾದ ಫಲಿತಾಂಶವನ್ನು ಪಡೆದು ಆದರ್ಶಪ್ರಾಯರಾಗಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜ್ಮೋಹನ್ರವರು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ರೂಬಿ ಕೂಬ್ಸ್ನಲ್ಲಿ ಫಿಕ್ಸಲಾರ್ಟ್ ಮಾಡಿ ಪ್ರಸಿದ್ಧಿ ಹೊಂದಿರುವ ಹಳೆ ವಿದ್ಯಾರ್ಥಿ ಮಹೇಶ್ರವರನ್ನು ಸನ್ಮಾನಿಸಲಾಯಿತು ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 99.33% ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಸುರಭಿ ಎಸ್.ಶೆಟ್ಟಿ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇಕಡಾ 97.67% ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದ ಸಂಕೇತ್ ಎಂ.ಜಿ ಇವರನ್ನು ಸನ್ಮಾನಿಸಲಾಯಿತು.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕೀರ್ತನಾ ಸ್ವಾಗತಿಸಿ, ಕಾರ್ಯದರ್ಶಿ ಸುಮಂತ್ ರಾಜ್ ವಂದಿಸಿದರು. ಕಾವ್ಯ ನಿರೂಪಿಸಿದರು. ವಿದ್ಯಾರ್ಥಿಗಳು ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.