ಉಡುಪಿ: ಜೀರ್ಣೋದ್ದಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಯಾಗಶಾಲೆಗೆ ನಾಳೆ (ಶುಕ್ರವಾರ) ಬೆಳಿಗ್ಗೆ 10.50 ಕ್ಕೆ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಸಮಾರಂಭದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಕೆ. ಸದಾಶಿವ ಪ್ರಭು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ರವಿರಾಜ ವಿ. ಆಚಾರ್ಯ ಉಪಸ್ಥಿತರಿರುವರು.
ಶ್ರೀ ದೇವಸ್ಥಾನದ ಜೀರ್ಣೋದ್ಧಾರಕ್ಕೆ ನಿಧಿ ಸಮರ್ಪಿಸುವವರು ಅಂದು ಪೇಜಾವರ ಶ್ರೀಗಳ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ನಿಧಿ ಸಮರ್ಪಿಸಬಹುದು ಎಂದು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.